Back
Home » Bike News
ರಾಯಲ್ ಎನ್‌ಫೀಲ್ಡ್‌ಗೆ ಪೈಪೋಟಿಯಾಗಿ ಬೆನೆಲ್ಲಿ ಇಂಪೀರಿಯಲ್ 400 ಬೈಕ್ ಬಿಡುಗಡೆ
DriveSpark | 22nd Oct, 2019 02:31 PM
 • ರಾಯಲ್ ಎನ್‌ಫೀಲ್ಡ್‌ಗೆ ಪೈಪೋಟಿಯಾಗಿ ಬೆನೆಲ್ಲಿ ಇಂಪೀರಿಯಲ್ 400 ಬೈಕ್ ಬಿಡುಗಡೆ

  ಬೆನೆಲ್ಲಿ ಇಂಪೀರಿಯಲ್ 400 ಕ್ಲಾಸಿಕ್ ಬೈಕ್ ಮಾದರಿಯು ಸಾಕಷ್ಟು ಹೊಸ ತಾಂತ್ರಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಬೈಕ್ ಬೆಲೆಯನ್ನು ರೂ. 1.69 ಲಕ್ಷಕ್ಕೆ ನಿಗದಿಪಡಿಸಲಾಗಿದೆ. ರೆಟ್ರೋ ಡಿಸೈನ್ ಪ್ರೇರಣೆಯೊಂದಿಗೆ ಅಭಿವೃದ್ದಿ ಹೊಂದಿರುವ ಇಂಪೀರಿಯಲ್ 400 ಬೈಕ್ ಮಾದರಿಯು ಹಲವು ವಿಶೇಷತೆಗಳೊಂದಿಗೆ ಮಾರಾಟಕ್ಕೆ ಲಭ್ಯವಿದ್ದು, ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಮತ್ತು ಜಾವಾ ಬೈಕ್‌ಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

 • ರಾಯಲ್ ಎನ್‌ಫೀಲ್ಡ್‌ಗೆ ಪೈಪೋಟಿಯಾಗಿ ಬೆನೆಲ್ಲಿ ಇಂಪೀರಿಯಲ್ 400 ಬೈಕ್ ಬಿಡುಗಡೆ

  ಕ್ಲಾಸಿಕ್ ಮಾದರಿಯ ಬೈಕ್‌ಗಳಲ್ಲೇ ವಿಶೇಷ ಡಿಸೈನ್ ಹೊಂದಿರುವ ಇಂಪೀರಿಯಲ್ 400 ಬೈಕ್‌ಗಳು 1950ರ ಅವಧಿಯಲ್ಲಿ ಜನಪ್ರಿಯತೆ ಹೊಂದಿದ್ದ ಬೆನೆಲ್ಲಿ ಮೊಟೊ ಬಿ ಬೈಕ್ ಪ್ರೇರಣೆಯೊಂದಿಗೆ ನಿರ್ಮಾಣ ಮಾಡಲಾಗಿದ್ದು, ಆಕರ್ಷಕ ಬೆಲೆಗಳೊಂದಿಗೆ ಗ್ರಾಹಕರ ಸೆಳೆಯುವ ವಿಶ್ವಾಸದಲ್ಲಿದೆ.

 • ರಾಯಲ್ ಎನ್‌ಫೀಲ್ಡ್‌ಗೆ ಪೈಪೋಟಿಯಾಗಿ ಬೆನೆಲ್ಲಿ ಇಂಪೀರಿಯಲ್ 400 ಬೈಕ್ ಬಿಡುಗಡೆ

  ಕ್ರೋಮ್ ಸೌಲಭ್ಯ ಹೊಂದಿರುವ ರೌಂಡ್ ಹೆಡ್‌ಲ್ಯಾಂಪ್, ಟೈಲ್ ಲೈಟ್ಸ್, ಟರ್ನ್ ಇಂಡಿಕೇಟರ್ ಮತ್ತು ಲಿವರ್ಸ್ ಜೊತೆಗೆ ಸ್ಪೋಕ್ ವೀಲ್ಹ್, ಟ್ವಿನ್ ಪಾಡ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಸ್ಪ್ಲಿಟ್ ಸೀಟ್, ರೆಟ್ರೋ ಸ್ಟೈಲ್ ಫ್ಯೂಲ್ ಟ್ಯಾಂಕ್ ಫೀಚರ್ಸ್ ಪಡೆದುಕೊಂಡಿದೆ.

 • ರಾಯಲ್ ಎನ್‌ಫೀಲ್ಡ್‌ಗೆ ಪೈಪೋಟಿಯಾಗಿ ಬೆನೆಲ್ಲಿ ಇಂಪೀರಿಯಲ್ 400 ಬೈಕ್ ಬಿಡುಗಡೆ

  ಎಂಜಿನ್ ಸಾಮರ್ಥ್ಯ
  ಇಂಪೀರಿಯಲ್ 400 ಬೈಕ್ ಮಾದರಿಯು 374 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಜೋಡಣೆ ಪಡೆದುಕೊಂಡಿದ್ದು, ಫೈವ್ ಸ್ಪೀಡ್ ಗೇರ್‌ಬಾಕ್ಸ್ ಸೌಲಭ್ಯದೊಂದಿಗೆ 20.7-ಬಿಎಚ್‌ಪಿ ಮತ್ತು 29-ಎನ್ಎಂ ಟಾರ್ಕ್ ಉತ್ಪಾದನೆ ಮೂಲಕ ಅತ್ಯುತ್ತಮ ಪರ್ಫಾಮೆನ್ಸ್ ಹೊಂದಿದೆ. ಹೊಸ ಬೈಕಿನ ಮುಂಭಾಗದಲ್ಲಿ 41 ಎಂಎಂ ಟೆಲಿಸ್ಕೊಫಿಕ್ ಫೋಕ್ಸ್ ಮತ್ತು ಹಿಂಭಾಗದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಶಾಕ್ ಅಬ್ಸಾರ್ವರ್ ನೀಡಲಾಗಿದೆ.

 • ರಾಯಲ್ ಎನ್‌ಫೀಲ್ಡ್‌ಗೆ ಪೈಪೋಟಿಯಾಗಿ ಬೆನೆಲ್ಲಿ ಇಂಪೀರಿಯಲ್ 400 ಬೈಕ್ ಬಿಡುಗಡೆ

  ಹಾಗೆಯೇ ಹೊಸ ಬೈಕಿನಲ್ಲಿ ರೈಡರ್ ಸುರಕ್ಷೆತೆಗಾಗಿ ಮುಂಭಾಗದ ಚಕ್ರದಲ್ಲಿ 300 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದ ಚಕ್ರದಲ್ಲಿ 240 ಎಂಎಂ ಡಿಸ್ಕ್ ಬ್ರೇಕ್ ನೀಡಲಾಗಿದ್ದು, ಸ್ಟ್ಯಾಂಡರ್ಡ್ ಆಗಿ ಡ್ಯುಯಲ್ ಚಾನೆಲ್ ಎಬಿಎಸ್ ಸೌಲಭ್ಯವನ್ನು ಜೋಡಿಸಲಾಗಿದೆ.

 • ರಾಯಲ್ ಎನ್‌ಫೀಲ್ಡ್‌ಗೆ ಪೈಪೋಟಿಯಾಗಿ ಬೆನೆಲ್ಲಿ ಇಂಪೀರಿಯಲ್ 400 ಬೈಕ್ ಬಿಡುಗಡೆ

  ಖರೀದಿಗೆ ಲಭ್ಯವಿರುವ ಬಣ್ಣಗಳು
  ಇಂಪೀರಿಯಲ್ 400 ಬೈಕ್ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ರೆಡ್, ಸಿಲ್ವರ್ ಮತ್ತು ಬ್ಲ್ಯಾಕ್ ಬಣ್ಣಗಳನ್ನು ನೀಡಲಾಗಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಬಣ್ಣದ ಆಯ್ಕೆ ನೀಡಲಿದೆ ಎನ್ನಲಾಗಿದೆ.

 • ರಾಯಲ್ ಎನ್‌ಫೀಲ್ಡ್‌ಗೆ ಪೈಪೋಟಿಯಾಗಿ ಬೆನೆಲ್ಲಿ ಇಂಪೀರಿಯಲ್ 400 ಬೈಕ್ ಬಿಡುಗಡೆ

  ಸರ್ವೀಸ್ ಮತ್ತು ವಾರಂಟಿ
  ಬೈಕ್ ಮಾರಾಟದ ನಂತರದ ಸೇವೆಗಳ ಕುರಿತಾಗಿ ಗ್ರಾಹಕರ ಅಸಮಾಧಾನವನ್ನು ಅರಿತಿರುವ ಬೆನೆಲ್ಲಿ ಸಂಸ್ಥೆಯು ಈ ಬಾರಿ ಇಂಪೀರಿಯರ್ 400 ಬಿಡುಗಡೆಯೊಂದಿಗೆ ಹಲವಾರು ಜನಪ್ರಿಯ ಸಂಸ್ಥೆಗಳೊಂದಿಗೆ ಕೈಜೋಡಿಸಿದ್ದು, ಬೆಸ್ಟ್ ಇನ್ ಕ್ಲಾಸ್ ಸರ್ವೀಸ್ ಮಾದರಿಯಾದ 3 ವರ್ಷ ಅಥವಾ ಅನ್‌ಲಿಮಿಟೆಡ್ ಕಿ.ಮೀ ವಾರಂಟಿ ಆಫರ್ ನೀಡಿದೆ.

 • ರಾಯಲ್ ಎನ್‌ಫೀಲ್ಡ್‌ಗೆ ಪೈಪೋಟಿಯಾಗಿ ಬೆನೆಲ್ಲಿ ಇಂಪೀರಿಯಲ್ 400 ಬೈಕ್ ಬಿಡುಗಡೆ

  ಇನ್ನು ಬೈಕ್ ಖರೀದಿಗಾಗಿ ಈಗಾಗಲೇ ರೂ.4 ಸಾವಿರ ಮುಂಗಡದೊಂದಿಗೆ ಬುಕ್ಕಿಂಗ್ ಪ್ರಕ್ರಿಯೆ ಆರಂಭವಾಗಿದ್ದು, ಇದೇ ತಿಂಗಳಾಂತ್ಯದಲ್ಲಿ ಹೊಸ ಬೈಕ್ ವಿತರಣೆಗೆ ಅಧಿಕೃತ ಚಾಲನೆ ಸಿಗಲಿದೆ. ಹೀಗಾಗಿ ಬೆನೆಲ್ಲಿ ಸಂಸ್ಥೆಯು ಈ ಬಾರಿ ಇಂಪೀರಿಯಲ್ 400 ಬಿಡುಗಡೆಯ ಮೂಲಕ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಕ್ಲಾಸಿಕ್ ಬೈಕ್ ಮಾದರಿಗಳಿಗೆ ಪೈಪೋಟಿಯಾಗಿ ಯಾವ ಮಟ್ಟಿಗೆ ಬೇಡಿಕೆ ಗಿಟ್ಟಿಸಿಕೊಳ್ಳಲಿದೆ ಎನ್ನುವುದನ್ನು ಕಾಯ್ದನೋಡಬೇಕಾಗಿದೆ.
ಇಟಾಲಿಯನ್ ಬೈಕ್ ಉತ್ಪಾದನಾ ಸಂಸ್ಥೆಯಾದ ಬೆನೆಲ್ಲಿ ಇದೇ ಮೊದಲ ಬಾರಿಗೆ ರಾಯಲ್ ಎನ್‍‍ಫೀಲ್ಡ್ ಕ್ಲಾಸಿಕ್ 350 ಮತ್ತು ಜಾವಾ ಬೈಕ್‍‍ಗಳಿಗೆ ಪೈಪೋಟಿಯಾಗಿ ದೇಶಿಯ ಮಾರುಕಟ್ಟೆಯಲ್ಲಿ ಇಂಪೀರಿಯಲ್ 400 ಕ್ಲಾಸಿಕ್ ಬೈಕ್ ಮಾದರಿಯನ್ನು ಬಿಡುಗಡೆಗೊಳಿಸಿದೆ.

ಟೆಕ್ನಾಲಜಿ