Back
Home » ಇತ್ತೀಚಿನ
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್‌ 2 ಸ್ಮಾರ್ಟ್‌ಫೋನ್ ಬಿಡುಗಡೆ!
Gizbot | 5th Aug, 2020 11:04 PM
 • ಸ್ಯಾಮ್‌ಸಂಗ್ ಸಂಸ್ಥೆ

  ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ಇಂದು ಗ್ಯಾಲಕ್ಸಿ Z ಫೋಲ್ಡ್‌ 2 5G ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಫೋಲ್ಡ್‌ಬಲ್ ಮಾದರಿಯ ರಚನೆಯನ್ನು ಹೊಂದಿದ್ದು, ಡ್ಯುಯಲ್ ಸ್ಕ್ರೀನ್‌ ವ್ಯವಸ್ಥೆ ಹೊಂದಿದೆ. ಹಾಗೆಯೇ 5G ಬೆಂಬಲ ಹೊಂದಿರುವ ಈ ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಪಡೆದಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್‌ 2 5G ಸ್ಮಾರ್ಟ್‌ಫೋನ್‌ ಬೆಲೆ ಎಷ್ಟು ಹಾಗೂ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ.


 • ಡಿಸ್‌ಪ್ಲೇ ರಚನೆ ಮತ್ತು ಡಿಸೈನ್

  ಗ್ಯಾಲಕ್ಸಿ Z ಫೋಲ್ಡ್‌ 2 5G ಸ್ಮಾರ್ಟ್‌ಫೋನ್ ಡ್ಯುಯಲ್ ಡಿಸ್‌ಪ್ಲೇ ರಚನೆಯನ್ನು ಹೊಂದಿದೆ. 7.6 ಇಂಚಿನ ಸೂಪರ್ AMOLED ಫ್ಲೆಕ್ಸಿಬಲ್ ಡಿಸ್‌ಪ್ಲೇ ಇದ್ದು, 120Hz ರೀಫ್ರೇಶ್ ರೇಟ್ ಪಡೆದಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 6.23 ಇಂಚಿನ ಸೂಪರ್ AMOLED ಪ್ಯಾನಲ್ ರಚನೆ ಹೊಂದಿದೆ.


 • ಪ್ರೊಸೆಸರ್ ಬಲವೇನು

  ಗ್ಯಾಲಕ್ಸಿ Z ಫೋಲ್ಡ್‌ 2 5G ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 865+ ಪ್ರೊಸೆಸರ್ ಹೊಂದಿದ್ದು, ಅದಕ್ಕೆ ಪೂರಕವಾಗಿ ಒನ್ UI 2.0 ಬೆಂಬಲಿತ ಆಂಡ್ರಾಯ್ಡ್‌ 10 ಓಎಸ್‌ ಸಪೋರ್ಟ್ ಇದೆ. ಇನ್ನು ಈ ಫೋನ್ 6GB RAM ಮತ್ತು 8GB RAM ಆಯ್ಕೆಯನ್ನು ಹೊಂದಿದ್ದು, 128GB ಆಂತರಿಕ ಸ್ಟೋರೇಜ್ ಸಾಮರ್ಥ್ಯ ಪಡೆದಿದೆ.


 • ಸ್ಪೆಷಲ್ ಕ್ಯಾಮೆರಾ

  ಗ್ಯಾಲಕ್ಸಿ Z ಫೋಲ್ಡ್‌ 2 5G ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಒಟ್ಟು ಮೂರು ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್‌ ಹೊಂದಿದೆ. ಇನ್ನು ಸೆಕೆಂಡರಿ ಮತ್ತು ತೃತೀಯ ಕ್ಯಾಮೆರಾಗಳೆರಡು ಸಹ ಕ್ರಮವಾಗಿ 12ಎಂಪಿಯ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿವೆ. ಸೆಲ್ಫಿ ಕ್ಯಾಮೆರಾ 10ಎಂಪಿ ಸೆನ್ಸಾರ್‌ನಲ್ಲಿದೆ.


 • ಬ್ಯಾಟರಿ ಲೈಫ್

  ಗ್ಯಾಲಕ್ಸಿ Z ಫೋಲ್ಡ್‌ 2 5G ಸ್ಮಾರ್ಟ್‌ಫೋನ್ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದಿದ್ದು, ಇದರೊಂದಿಗೆ 15W ಫಾಸ್ಟ್‌ ಚಾರ್ಜಿಂಗ್ ಬೆಂಬಲವನ್ನು ಸಹ ಹೊಂದಿದೆ. ಹಾಗೆಯೇ ಈ ಫೋನ್ ಸೈಡ್‌ ಮೌಂಟೆಡ್‌ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಸೌಲಭ್ಯವನ್ನು ಪಡೆದಿದೆ.
ದಕ್ಷಿಣ ಕೊರಿಯಾ ಟೆಕ್ ಸಂಸ್ಥೆ ಸ್ಯಾಮ್‌ಸಂಗ್‌ನ ಬಹುನಿರೀಕ್ಷಿತ 'ಗ್ಯಾಲಕ್ಸಿ ನೋಟ್‌ 20 ಸ್ಮಾರ್ಟ್‌ಫೋನ್ ಸರಣಿ' ಇಂದು (ಆ.5) ಬಿಡುಗಡೆ ಆಗಿದೆ. ಈ ಗ್ಯಾಲಕ್ಸಿ ನೋಟ್‌ 20 ಸರಣಿಯಲ್ಲಿ ಗ್ಯಾಲಕ್ಸಿ 20 ಮತ್ತು ಗ್ಯಾಲಕ್ಸಿ 20 ಅಲ್ಟ್ರಾ ಹೈಎಂಡ್‌ ಫ್ಲ್ಯಾಗ್‌ಶಿಫ್‌ ಸ್ಮಾರ್ಟ್‌ಫೋನ್‌ಗಳು ಅನಾವರಣ ಆಗಿವೆ. ಅವುಗಳೊಂದಿಗೆ ಗ್ಯಾಲಕ್ಸಿ Z ಫೋಲ್ಡ್‌ 2 5G ಫೋಲ್ಡೆಬಲ್‌ ಸ್ಮಾರ್ಟ್‌ಫೋನ್ ಸಹ ಲಾಂಚ್ ಆಗಿದ್ದು, ಗ್ರಾಹಕರಿಗೆ ಖುಷಿ ತಂದಿದೆ.

 
ಟೆಕ್ನಾಲಜಿ