Back
Home » ಸಿನಿ ಸಮಾಚಾರ
'ಅವನೇ ಶ್ರೀಮನ್ನಾರಾಯಣ' ಚಿತ್ರದ ಬಿಡುಗಡೆ ದಿನಾಂಕ ಘೋಷಿಸಿದ ನಿರ್ಮಾಪಕ
Oneindia | 22nd Oct, 2019 12:20 PM

ಈ ವರ್ಷದ ಬಹು ನಿರೀಕ್ಷಿತ ಸಿನಿಮಾಗಳ ಪೈಕಿ ಒಂದು 'ಅವನೇ ಶ್ರೀಮನ್ನಾರಾಯಣ'. ಈ ಸಿನಿಮಾದ ಬರುವಿಕೆಗಾಗಿ ಕಾಯುತ್ತಿದ್ದ ಪ್ರೇಕ್ಷಕರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಸಿನಿಮಾದ ಬಿಡುಗಡೆ ದಿನವನ್ನು ನಿರ್ಮಾಪಕರು ಘೋಷಣೆ ಮಾಡಿದ್ದಾರೆ.

ಡಿಸೆಂಬರ್ 27 ರಂದು 'ಅವನೇ ಶ್ರೀಮನ್ನಾರಾಯಣ' ಸಿನಿಮಾ ಬಿಡುಗಡೆ ಆಗುತ್ತಿದೆ. 'ಕಿರಿಕ್ ಪಾರ್ಟಿ' ಸಿನಿಮಾ ಡಿಸೆಂಬರ್ 30, 2016 ರಲ್ಲಿ ರಿಲೀಸ್ ಆಗಿದ್ದು, ಅದೇ ತಿಂಗಳು 'ಅವನೇ ಶ್ರೀಮನ್ನಾರಾಯಣ' ಬಿಡುಗಡೆ ಆಗುತ್ತಿದೆ. ಮೂರು ವರ್ಷಗಳ ನಂತರ ರಕ್ಷಿತ್ ಶೆಟ್ಟಿ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ.

ರಕ್ಷಿತ್ ಶೆಟ್ಟಿ ಚಿತ್ರಕ್ಕೆ ತೆಲುಗಿನ ಸ್ಟಾರ್ ರೈಟರ್ ಲಿರಿಕ್ಸ್

'ಕೆಜಿಎಫ್', 'ಕುರುಕ್ಷೇತ್ರ', 'ಪೈಲ್ವಾನ್' ಸಿನಿಮಾಗಳ ನಂತರ ಬರುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಇದಾಗಿದೆ. ಸಿನಿಮಾ ಟ್ರೇಲರ್ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದೆ. ಸಿನಿಮಾ ಮೇಕಿಂಗ್ ಇಡೀ ಇಂಡಸ್ಟ್ರಿಯಲ್ಲಿ ಸುದ್ದಿ ಮಾಡಿದೆ.

ರಕ್ಷಿತ್ ಶೆಟ್ಟಿ, ಶಾನ್ವಿ ಶ್ರೀವಾತ್ಸವ, ಪ್ರಮೋದ್ ಶೆಟ್ಟಿ, ಅಚ್ಚುತ್ ಕುಮಾರ್, ಬಾಲಾಜಿ ಮನೋಹರ್ ಸೇರಿದಂತೆ ಅನೇಕರು ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಪೊಲೀಸ್ ಆಧಿಕಾರಿ ಪಾತ್ರ ಮಾಡಿದ್ದಾರೆ. ಅವರ ಪಾತ್ರ ಹೇಗಿರುತ್ತದೆ ಎನ್ನುವ ಕುತೂಹಲ ಇದೆ.

ಅಜ್ಜಿಯನ್ನು ಕಳೆದುಕೊಂಡ ನೋವಿನಲ್ಲಿ ನಟ ರಕ್ಷಿತ್ ಶೆಟ್ಟಿ

ಪುಷ್ಕರ್ ಮಲ್ಲಿಕಾರ್ಜುನಯ್ಯ ಹಾಗೂ ಹೆಚ್ ಕೆ ಪ್ರಕಾಶ್ ಸಿನಿಮಾದ ನಿರ್ಮಾಣ ಮಾಡಿದ್ದಾರೆ. ಸಚಿನ್ ಸಿನಿಮಾದ ನಿರ್ದೇಶಕರಾಗಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಕನ್ನಡದಲ್ಲಿ ಅತಿ ಹೆಚ್ಚು ಬಜೆಟ್ ನಲ್ಲಿ ನಿರ್ಮಾಣ ಆದ ಪೈಕಿ ಈ ಸಿನಿಮಾ ಕೂಡ ಒಂದಾಗಿದೆ.

   
 
ಟೆಕ್ನಾಲಜಿ