Back
Home » ಇತ್ತೀಚಿನ
ಇಂದು ಪೊಕೊ M2 ಪ್ರೊ ಸ್ಮಾರ್ಟ್‌ಫೋನ್‌ ಫಸ್ಟ್ ಸೇಲ್‌!..ಬೆಲೆ13,999ರೂ.!
Gizbot | 14th Jul, 2020 10:40 AM
 • ಪೊಕೊ M2 ಪ್ರೊ

  ಪೊಕೊ M2 ಪ್ರೊ ಸ್ಮಾರ್ಟ್‌ಫೋನ್ ಬಜೆಟ್ ಫೋನ್‌ ಆಗಿದ್ದು, ತನ್ನ ವರ್ಗದಲ್ಲಿಯೇ ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡಿದೆ. ಈ ಫೋನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ, ಫಾಸ್ಟ್‌ ಚಾರ್ಜಿಂಗ್ ಬೆಂಬಲಿತ 5,020mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಹಾಗೆಯೇ ಈ ಫೋನ್ 4GB+ 64GB, 6GB + 64GB ಮತ್ತು 6GB + 128GB ವೇರಿಯಂಟ್ ಮಾದರಿಗಳ ಆಯ್ಕೆಯನ್ನು ಪಡೆದಿದೆ. ಇನ್ನುಳಿದಂತೆ ಈ ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.


 • ಡಿಸ್‌ಪ್ಲೇ ರಚನೆ

  ಪೊಕೊ M2 ಪ್ರೊ ಸ್ಮಾರ್ಟ್‌ಪೋನ್‌ 1,080x2,400 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಆಗಿದ್ದು, ಕಾರ್ನಿಂಗ್‌ ಗೊರಿಲ್ಲಾ ಗ್ಲಾಸ್‌ 5 ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದೆ. ಇದಲ್ಲದೆ ವೀಡಿಯೋ ಕರೆ ಹಾಗೂ ವೀಡಿಯೋ ವೀಕ್ಷಣೆಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನ ಹೊಂದಿದೆ.


 • ಪ್ರೊಸೆಸರ್‌ ಬಲ

  ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 720 G SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ ಎಂಐಯುಐ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 6GB RAM ಮತ್ತು 128GB ಆಮತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳಬಹುದಾಗಿದೆ.


 • ಕ್ಯಾಮೆರಾ ವಿನ್ಯಾಸ

  ಪೊಕೊ M2 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್‌ ಕ್ಯಾಮೆರಾ ಸೆನ್ಸಾರ್‌, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸೆನ್ಸಾರ್‌ ಅನ್ನು ಹೊಂದಿದೆ.ಇನ್ನು ಈ ಸೆಲ್ಫಿ ಕ್ಯಾಮೆರಾ ನೈಟ್‌ಮೋಡ್‌ ಅನ್ನು ಸಹ ಬೆಂಬಲಿಸಲಿದೆ.


 • ಬ್ಯಾಟರಿ ಮತ್ತು ಇತರೆ

  ಪೊಕೊ M2 ಪ್ರೊ ಸ್ಮಾರ್ಟ್‌ಫೋನ್‌ 5,020mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 33w ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ V5.0, GPS, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ರಿಯರ್‌ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಹೊಂದಿದೆ.


 • ಬೆಲೆ ಮತ್ತು ಲಭ್ಯತೆ

  ಫ್ಲಿಪ್‌ಕಾರ್ಟ್‌ ತಾಣದಲ್ಲಿ ಇಂದು ಫಸ್ಟ್‌ ಟೈಮ್ ಪೊಕೊ M2 ಪ್ರೊ ಸ್ಮಾರ್ಟ್‌ಫೋನ್‌ ಮಾರಾಟ ಆರಂಭಿಸಲಿದೆ. ಬೆಲೆ 4GB RAM+ 64GB ಸ್ಟೋರೇಜ್ ವೇರಿಯಂಟ್‌ ಬೆಲೆ 13,999 ರೂ, ಮತ್ತು 6GB RAM+ 64GB ಸ್ಟೋರೇಜ್ ಆಯ್ಕೆಯ ಸ್ಮಾರ್ಟ್‌ಫೋನ್‌ 14,999ರೂ ಹಾಗೂ 6GB RAM + 128GB ಶೇಖರಣಾ ಮಾದರಿಯು 16,999 ರೂ. ಬೆಲೆಯನ್ನ ಹೊಂದಿದೆ. ಇನ್ನು ಈ ಫೋನ್ ಔಟ್ ಆಫ್ ದಿ ಬ್ಲೂ, ಗ್ರೀನ್ ಮತ್ತು ಗ್ರೀನರ್, ಮತ್ತು ಟು ಶೇಡ್ಸ್ ಆಫ್ ಬ್ಲ್ಯಾಕ್ ಕಲರ್‌ ಆಯ್ಕೆಗಳಲ್ಲಿ ಲಬ್ಯವಾಗಲಿದೆ.
ಶಿಯೋಮಿ ಸಂಸ್ಥೆಯಿಂದ ಬೇರ್ಪಟ್ಟು ಸ್ವತಂತ್ರ ಬ್ರ್ಯಾಂಡ್‌ ಆಗಿ ಗುರುತಿಸಿಕೊಂಡಿರುವ ಪೊಕೊ ಹೊಸದಾಗಿ ಬಿಡುಗಡೆ ಮಾಡಿರುವ ಪೊಕೊ M2 ಪ್ರೊ ಫೋನ್ ಬಜೆಟ್‌ ಬೆಲೆಯಿಂದ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನಿನ ಮೊದಲ ಸೇಲ್ ಇಂದು ಮಧ್ಯಾಹ್ನ 12ರಿಂದ ಇ-ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಆರಂಭವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ವೇರಿಯಂಟ್ ಬೆಲೆಯು 13,999ರೂ.ಗಳು ಆಗಿದೆ.

 
ಟೆಕ್ನಾಲಜಿ